ಜನಪ್ರಿಯ ನಟನಿಗೆ ಮುಳುವಾದ ಹೇಳಿಕೆ
ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ನಿನ್ನೆ ರಾತ್ರಿ ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಸಮುದಾಯವೊಂದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕುರಿತು ಪೋಸಾನಿ ಕೃಷ್ಣ ಮುರಳಿ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಟನನ್ನು ಬಂಧಿಸಲಾಗಿದೆ. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಗಿತ್ತು.
ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ ಎಸ್‌ಸಿ/ಎಸ್‌ಟಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಟನನ್ನು
ಪೋಸಾನಿ ಕೃಷ್ಣ ಅವರು ಕಾನೂನು ಸಂಕಷ್ಟ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. 2024ರ ನವೆಂಬರ್‌ನಲ್ಲಿ ಸಿಎಂ ಚಂದ್ರಬಾಬು ನಾಯ್ಡು ವಿರದ್ಧವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆಗಲೂ ತಮ್ಮ ವಿರುದ್ಧ ಕೇಸ್ ದಾಖಲಾಗಿತ್ತು.