ಪುತ್ತೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಯಾತ್ರೆ ಮಾ.5 ಭಾನುವಾರ ನಡೆಯಲಿದೆ.
ಭಾನುವಾರ ಮಧ್ಯಾಹ್ನ 2.30 ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಸಂಘರ್ಷದಿಂದ ಹುಟ್ಟಿದ ಸಂಘಟನೆಯ ಶೌರ್ಯ ನಡಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಶೌರ್ಯ ಯಾತ್ರೆ ಆರಂಭಗೊಳ್ಳಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ.
ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.