ಮುಂಬಯಿ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಪಾಕಿಸ್ಥಾನಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪಾಕಿಸ್ಥಾನದ ಸಂಖ್ಯೆಯಿಂದ ವರ್ಲಿ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಸಂದೇಶ ಕಳುಹಿಸಲಾಗಿದೆ. ಇದು ಗಂಭೀರ ಭದ್ರತಾ ಕಳವಳ ಹುಟ್ಟುಹಾಕಿದೆ. ಮುಂಬಯಿ ಪೊಲೀಸರು ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಸಂದೇಶದ ಮೂಲವನ್ನು ಪತ್ತೆಹಚ್ಚಲು ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂಒ ಮತ್ತು ಇತರ ಪ್ರಮುಖ ಸರ್ಕಾರಿ ಕಟ್ಟಡಗಳ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.