ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಮಾ.1 ಶನಿವಾರ ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಳ್ಳುವರು.
ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಸುಳ್ಯ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸುಳ್ಯ ಶ್ರೀ ಹರಿ ಕಾಂಪ್ಲೆಕ್ಸ್ ಮಾಲಕ ಕೃಷ್ಣ ಕಾಮತ್ ಭಾಗವಹಿಸುವರು ಎಂದು ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ.