ಪುತ್ತೂರು: ನ್ಯಾಷನಲ್‍ಪ್ರೆಸ್ ಕೌನ್ಸಿಲ್ ಆಫ್‍ಎಸ್‍ಸಿಆರ್‍ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ ಪುತ್ತೂರು ಬಂಟರ ಭವನದಲ್ಲಿ ಶನಿವಾರ ನಡೆಯಿತು.
ಸಮಾರಂಭದ ಉದ್ಘಾಟನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ನೆರವೇರಿಸಿ, ಡಾ|ರಾಜೇಂದ್ರ ಕುಮಾರ್ ಸಹಕಾರಿ ಕ್ಷೇತ್ರದಲ್ಲಿ ಉತ್ತುಂಗ ಸ್ಥಾನವನ್ನು ಸಾಧಿಸಿದ್ದಾರೆ. ಸುದೀರ್ಘ ಅವಧಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಎಲ್ಲಾ ಸಮುದಾಯದ ಜತೆಯೂ ಪ್ರೀತಿ ಇಟ್ಟುಕೊಂಡ ಇವರು ದ.ಕ.ಜಿಲ್ಲೆ ಅಲ್ಲದೆ ರಾಜ್ಯದಲ್ಲಿಯೂ ತನ್ನ ಛಾಪು ಮೂಡಿಸಿದವರಾಗಿದ್ದಾರೆ ಎಂದ ಅವರು, ಸಹಕಾರಿ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಶಶಿಕುಮಾರ್ ರೈರವರು ಸಹಕಾರಿ ಅಲ್ಲದೆ ಧಾರ್ಮಿಕ, ಸಾಮಾಜಿಕ ರಂಗದಲ್ಲಿಯೂ ಕೆಲಸ ಕಾರ್ಯ ಮಾಡುತ್ತಿದ್ದಾರೆ ಎಂದರು.
ದ.ಕ.ಜಿಲ್ಲಾ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍ಅಭಿನಂದನಾ ಭಾಷಣ ಮಾಡಿ, 31 ವರ್ಷಗಳ ಕಾಲ ಸಹಕಾರಿ ಕ್ಷೇತ್ರದ ದಿಗ್ಗಜನಾಗಿ ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗವನ್ನು ಪರಿವರ್ತನೆ ಮಾಡಿದ ದ.ಕ.ಜಿಲ್ಲೆಯ ಸಹಕಾರಿ ರಂಗದಲ್ಲಿ ಅತೀ ಹೆಚ್ಚು ಪ್ರಶಸ್ತಿ ಪಡೆದುಕೊಂಡಿರುವ ಏಕೈಕ ಸಾಧನಾಶೀಲ ವ್ಯಕ್ತಿ ಡಾ|ರಾಜೇಂದ್ರ ಕುಮಾರ್, ಸಹಕಾರಿ ಕ್ಷೇತ್ರದಲ್ಲಿ ಅಜಾತಶತ್ರುವಾಗಿ ಬೆಳೆದ ರಾಜೇಂದ್ರಕುಮಾರ್‌ರವರು ನುಡಿದಂತೆ ನಡೆದ ಸಹಕಾರಿ ಧುರೀಣರಾಗಿದ್ದಾರೆ ಎಂದರು.
ಅಭಿನಂದನೆ ಸ್ವೀಕರಿಸಿದ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ನಾವು ಯಾವುದೇ ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗಬಾರದು ನಮ್ಮನ್ನು ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನನಗೆ ಸಿಕ್ಕಿದ ಎಲ್ಲಾ ಪ್ರಶಸ್ತಿ ಸನ್ಮಾನಗಳಿಗೆ ಸಹಕಾರಿ ಬಂಧುಗಳಾದ ನೀವೇ ಕಾರಣಕರ್ತರು. ಸಹಕಾರಿ ಕ್ಷೇತ್ರದಲ್ಲಿ ನನ್ನನ್ನು ಬೆಳೆಸಿರುವ ಕಾರಣದಿಂದ ನನಗೆ ಪ್ರಶಸ್ತಿ ಬಂದಿದೆ ಎಂದರು. 40 ವರ್ಷದಿಂದ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಎಂದ ಅವರು, ಜಿಲ್ಲೆಯ 179 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಲಾಭದಾಯಕವಾಗಿದೆ. 28 ವರ್ಷಗಳಿಂದ ಸಹಕಾರಿ ಸಂಘಗಳು ಅಭಿವೃದ್ಧಿಯಾಗಿದೆ. 31 ವರ್ಷದಿಂದ ಅಧ್ಯಕ್ಷನಾಗಿ ಯಾವುದೇ ರಾಜಕೀಯ ಮಾಡದೆ ಕೆಲಸ ಮಾಡುತ್ತಿದ್ದೇನೆ ಎಂದರು.
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶ್ಯಾಮ್‍ಭಟ್ ಅಭಿನಂದನೆ ಮಾಡಿ ಮಾತನಾಡಿ, ಕಳೆದ 3 ದಶಕಗಳಿಂದ ದ.ಕ.ಜಿಲ್ಲೆಯ ಅನಭಿಷಿಕ್ತ ಸಾಮ್ರಾಟನಾಗಿ ಮೆರೆಯುತ್ತಿರುವ ವ್ಯಕ್ತಿ ಎಂದರೆ ರಾಜೇಂದ್ರ ಕುಮಾರ್‌ರವರು. ಪುಜಾಸತ್ತಾತ್ಮಕವಾಗಿ ಆಯ್ಕೆಗೊಂಡು ಸಹಕಾರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸರಕಾರಿ ಅಧಿಕಾರಿಗಳನ್ನು ಗೌರವಯುತವಾಗಿ ನೋಡಿಕೊಂಡು ಕೆಲಸ ಮಾಡಿಸುತ್ತಿದ್ದರು ಎಂದ ಅವರು, ಶಶಿಕುಮಾರ್ ರೈರವರು ಕಳೆದ 10 ವರ್ಷಗಳಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾರೆ. ಸಹಕಾರಿ ಅಲ್ಲದೆ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ ಎಂದರು.
ದರು. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಸಂಜೀವ ಮಠಂದೂರು, ಮಂಗಳೂರು ಮಾಸ್‍ಲಿ. ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಪಾಲ್ಗೊಂಡು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಿ ಮಾತನಾಡಿ, ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ರಾಜೇಂದ್ರ ಕುಮರ್ ರವರು ಎಲ್ಲರೊಂದಿಗೂ ಒಡನಾಟ ಹೊಂದಿದವರು. ಅವರು ಬೆಳೆಯುವುದರ ಜೊತೆಗೆ ಸಮಾಜವನ್ನು ಬೆಳೆಸಿದ್ದಾರೆ. ಸಹಕಾರಿ ರಂಗವನ್ನು ಅದ್ಭುತವಾಗಿ ಬೆಳೆಸಿ ಎತ್ತರಕ್ಕೆ ಕೊಂಡು ಹೋದ ವ್ಯಕ್ತಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವ ವಹಿಸಿ ಯಾವುದೇ ಭ್ರಷ್ಟಾಚಾರವಿಲ್ಲದೆ ಮುನ್ನಡೆಸಿದವರಾಗಿದ್ದಾರೆ ಎಂದರು.
ಅಭಿನಂದನೆ ಸ್ವೀಕರಿಸಿದ ಶಶಿಕುಮಾರ್ ರೈ ಬಾಲೊಟ್ಟು ಮಾತನಾಡಿ, ಇಂದು ಅರ್ಥಪೂರ್ಣವಾಗಿ ವ್ಯವಸ್ಥಿತವಾಗಿ ಅಭಿನಂದನಾ ಸಮಿತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ನಿಮ್ಮ ಅಭಿನಂದನೆಗೆ ಪೂರಕವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ವೇದಿಕೆಯಲ್ಲಿ ಅಭಿನಂದನಾ ಸಮಿತಿ ಗೌರವ ಸಲಹೆಗಾರ ನನ್ಯ ಅಚ್ಯುತ ಮೂಡೆತ್ತಾಯ, ಸದಾಶಿವ ಉಲ್ಲಾಳ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಅಭಿನಂದನಾ ಸಮಿತಿಯ ಗೌರವ ಸಲಹೆಗಾರ ನನ್ನ ಅಚ್ಯುತ ಮೂಡತ್ತಾಯ, ಪ್ರಕಾಶ್ಚಂದ್ರ ರೈ ಕೈಕಾರ, ಸುಳ್ಯ ತಾಲೂಕು ಸಂಚಾಲಕ ಸಂತೋಷ್ ಕುತ್ತಮೊಟ್ಟೆ, ಕಡಬ ತಾಲೂಕು ಸಂಚಾಲಕ ಗಣೇಶ್ ಉದನಡ್ನ, ಬೆಳ್ತಂಗಡಿ ತಾಲೂಕು ಸಂಚಾಲಕ ರಾಘವೇಂದ್ರ ನಾಯಕ್, ಎಸ್ ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವ ಹಣಾತ್ಮಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
ಕಲರ್ಸ್ ಕನ್ನಡ ಟಿವಿಯ ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಅಪೇಕ್ಷಾ ಪೈ ಪ್ರಾರ್ಥಿಸಿದರು. ಪ್ರಕಾಶ್ ಚಂದ್ರ ರೈ ಪ್ರಕಾರ, ಕುಶಾಲಪ್ಪ ಗೌಡ ಪೂವಾಜೆ, ನನ್ನ ಅಮ್ಮತ ಮೂಡತ್ತಾಯ, ಎಸ್.ಎನ್ ಮನ್ಮಥ, ಎಸ್.ಬಿ ಜಯರಾಮ್ ರೈ ಬಳಜ್ಯ, ಗೋಪಾಲಕೃಷ್ಣ ಭಟ್, ಗಣೇಶ್ ಕೆ. ಉದನಡ್ಕ, ರಾಘವೇಂದ್ರ ನಾಯಕ್, ಸಂತೋಷ್ ಕುತ್ತಮೊಟ್ಟೆ, ಹರೀಶ್ ರೈ ಪಿ., ಜಯಪ್ರಕಾಶ್ ರೈ ಸಿ.ರವರು ಅತಿಥಿಗಳನ್ನು ಹೂಗುಚ್ಛ ನೀಡಿ ಗೌರವಿಸಿದರು. ಅಭಿನಂದನಾ ಸಮಿತಿ ಕಾರ್ಯದರ್ಶಿ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿ.ಇ.ಓ. ಜಯಪ್ರಕಾಶ್ ರೈ ಸಿ. ವಂದಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕಡೆಂಜಿ ಮತ್ತು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಚಂದ್ರಶೇಖರ ಗೌಡ ಕಾರ್ಯಕ್ರಮ ನಿರೂಪಿಸಿದರು.