ಕುದ್ಮಾರು : ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಮಾ. 9 ಭಾನುವಾರದಂದು ಕುದ್ಮಾರು ಗ್ರಾಮದ ಅನ್ಯಾಡಿಯಲ್ಲಿ ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಲಿದೆ.
ನೇಮೋತ್ಸವದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 10 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ಹಾಗೂ ಸಪರಿವಾರ ದೈವಗಳ ನೇಮೋತ್ಸವ, ಎಲ್ಲಾ ಗ್ರಾಮಸ್ಥರಿಗೆ ಸಿರಿಮುಡಿ ಗಂಧಪ್ರಸಾದ ವಿತರಣೆ, ರಾತ್ರಿ 1:30 ಕ್ಕೆ ಚಾಪಲ್ಲ ಗಡಿಗೆ ಮಾರಿ ಹೋಗುವುದು ನಡೆಯಲಿದೆ.
ನೇಮೋತ್ಸವಕ್ಕೆ ಭಕ್ತಾದಿಗಳು ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕಾರ್ಯದರ್ಶಿ ನಾಗೇಶ್ ಕೆಡೆಂಜಿ ಹಾಗೂ ಆಡಳಿತ ಮಂಡಳಿ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.