ವಿಟ್ಲ: ಕಲ್ಲಿನ ಕೋರೆಯಲ್ಲಿ ಬಾರಿ ಪ್ರಮಾಣದ ಸ್ಫೋಟ ಸಂಭವಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸ್ಫೋಟಗೊಂಡ ಶಬ್ದಕ್ಕೆ ವಿಟ್ಲದ ಜನತೆ ಬೆಚ್ಚಿ ಬಿದ್ದಿದ್ದಾರೆ.
ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆಯ ಸುತ್ತಮುತ್ತಲಿನಲ್ಲಿ ಜೋರಾಗಿ ಶಬ್ದ ಕೇಳಿದೆ. ಈ ಶಬ್ದಕ್ಕೆ ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು. ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ಪರಿಣಾಮ ಹಲವು ಮನೆಗಳಿಗೆ ಹಾನಿಯುಂಟಾಗಿದ್ದು ಸ್ಥಳಕ್ಕೆ ವಿಟ್ಲ ಪೊಲೀಸರು, ಎಸ್ಪಿ ಹಾಗೂ ಇತರ ಹಲವು ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿದ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ್ ಶೆಟ್ಟಿ ಉಜಿರೆಮಾರ್ ರನ್ನು ಸ್ಥಳೀಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.