ಉಪ್ಪಿನಂಗಡಿ : ಉಪ್ಪಿನಂಗಡಿಯ ವಳಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ನದಿಯಿಂದ ಮರಳು ತೆಗೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಿಟಾಚಿಯ ಮುಖೇನ ನದಿಯಿಂದ ಮರಳು ತೆಗೆಯುತ್ತಿದ್ದು, ಅಲ್ಲಿಯ ಸಾರ್ವಜನಿಕರು ಪ್ರಶ್ನೆಸಿದಾಗ ಲೋಕೋಪಯೋಗಿ ಇಲಾಖೆಯ ಕಾಮಗಾರಿಗೆ ಮರಳು ತೆಗೆಯುತ್ತಿರುವುದಾಗಿ ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಅಂತಹ ಯಾವುದೇ ಕಾಮಗಾರಿ ನಡೆಸುತ್ತಿಲ್ಲ ಹಾಗೂ ನಮಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದಿದೆ. ಪ್ರತಿನಿತ್ಯ ಇಲ್ಲಿ ಲೋಡುಗಟ್ಟಲೆ ಮರಳು ತೆಗೆದು ಸಾಗಾಟ ಮಾಡಲಾಗುತ್ತಿದ್ದು ಸರ್ಕಾರದ ಬೊಕ್ಕನಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ.
ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮೌನವಾಗಿರುವುದು ಈ ಕೃತ್ಯಕ್ಕೆ ಹಲವು ಅನುಮಾನಕ್ಕೆ ಗುರಿಯಾಗಿದೆ.