ಕಲಬುರಗಿ : ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಸಿದ್ದು, ಸುರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಎನ್ನಲಾಗಿದೆ.
ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.