ಪುತ್ತೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಲುವಾಗಿ ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ವಿಜ್ಞಾನ ಸಂಬಂಧಿತ ವಿಚಾರಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 12 ವಿದ್ಯಾರ್ಥಿಗಳ ತಂಡ ಭಾಗವಹಿಸಿ ಪ್ರಥಮ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ವೈಜ್ಞಾನಿಕ ಅವಿಷ್ಕಾರಗಳ ಬಗ್ಗೆ ಆಸಕ್ತಿ ಮತ್ತು ಕ್ರಿಯಾಶೀಲತೆಯನ್ನು ಬೆಳೆಸುವ ಸಲುವಾಗಿ ಆಯೋಜಿಸಲಾಗಿದ್ದ ಈ ಸ್ಪರ್ಧೆಗಳ ಪೇಪರ್ ಪ್ರೆಸೆಂಟೇಷನ್ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ನಿಲಿಷ್ಕಾ.ಕೆ., 8ನೇ ತರಗತಿ ವಿದ್ಯಾರ್ಥಿನಿ ಅವನಿ ತಂಡ ಹಾಗೂ ಸರ್ಕ್ಯೂಟ್ ಕ್ರಾಫ್ಟ್ ವಿಭಾಗದಲ್ಲಿ 8ನೇ ತರಗತಿ ವಿದ್ಯಾರ್ಥಿಗಳಾದ ಶುಭನ್ ಮತ್ತು ಕ್ಷಮಿತ್ ಜೈನ್ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕವೃಂದದವರು ಅಭಿನಂದಿಸಿದ್ದಾರೆ.