ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ.ವಾಗಿದ್ದು, ಇದು ಬಹಳ ದುಃಖಕರ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ.
ಸದನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೇಮಕವಾಗಿರುವ ಸಿಬ್ಬಂದಿಗಳ ಬಗ್ಗೆ ಪ್ರಶ್ನಿಸಿದಾಗ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗುವಂತೆ ಪ್ರೋತ್ಸಾಹಿಸಲು ಅಗತ್ಯ ಸವಲತ್ತುಗಳನ್ನು ಒದಗಿಸುವ ಕುರಿತು ಸರಕಾರ ಕ್ರಮ ಕೈಗೊಳ್ಳಬೇಕೆಂದು ಗೃಹ ಮಂತ್ರಿಗೆ ಪತ್ರ ಬರೆಯಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳ ಸಲಹೆ ಪಡೆಯುವ ಕುರಿತು ಚರ್ಚೆಯೂ ನಡೆಯಲಿದೆ ಎಂದು ಅವರು ತಿಳಿಸಿದರು.