ಪುತ್ತೂರು : ಕೈಕಾರ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಂಗವಾಗಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಶತಮಾನ ಕಂಡ ಶಾಲೆಗೆ ನಾವೇನು ಕೊಡಬಹುದು ಎಂಬ ಯೋಚನೆ ಮಾಡಿ ಇಂದು ಶತಮಾನೋತ್ಸವ ಕಾರ್ಯಕ್ರಮ ಆಗುತ್ತಿದೆ. ಹಿರಿಯ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಏನೆಲ್ಲ ಮಾಡಬಹುದು ಅಂಥ ತೋರಿಸುವ ಕೆಲಸ ಇಲ್ಲಿ ಆಗಿದೆ. ಪ್ರಾಥಮಿಕ ಶಾಲೆಗಳಿಗೆ ವೈಜ್ಞಾನಿಕ ರೀತಿಯಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಕೊಡುವ ಕೆಲಸ ಆಗಿದೆ. ಸಂಶೋಧನೆ ನೆಲೆಯಲ್ಲಿ ಹೊಸ ಹೊಸ ವಸ್ತುಗಳನ್ನು ಕೊಡುವ ಮೂಲಕ ವಿದ್ಯಾರ್ಥಿಗಳಳ ಮನಸ್ಸಿಗೆ ಸಂತೋಷ ಕೊಡುವ ಕೆಲಸ ಆಗಿದೆ ಎಂದರು.
ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ಕೈಕಾರ ಅಧ್ಯಕ್ಷತೆ ವಹಿಸಿದ್ದರು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ಸತೀಶ್ ರೈ ಮುಖ್ಯ ಭಾಷಣ ಮಾಡಿದರು. ಮುಖ್ಯ ಅತಿೃಥಿಗಳಾಗಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಎಸ್ಡಿಎಂಸಿ ಅಧ್ಯಕ್ಷೆ ಗಂಗಾ,, ಕೈಕಾರ ಶಾಲಾ ಮುಖ್ಯ ಶಿಕ್ಷಕ ರಾಮಣ್ಣ ರೈ ಪಾಲ್ಗೊಂಡು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಸಿಬ್ಬಂದಿಗಳು, ಪೋಷಕರು ಪಾಲ್ಗೊಂಡಿದ್ದರು.