ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸತ್ಯನಾರಾಯಣ ದೇವರ ಪ್ರತಿಷ್ಠಾಪನೆಯ 24ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಶುಕ್ರವಾರ ನಡೆಯಿತು.
ಪೂಜೆ ಅಂಗವಾಗಿ ಬೆಳಗ್ಗೆ 6 ರಿಂದ ಪಂಚಗವ್ಯ ಪುಣ್ಯಾಹ ಪುರಸ್ಸರ ಕಲಶ ಪ್ರತಿಷ್ಠೆ, ಪಂಚಾಮೃತಾಭಿಷೇಕ, ಕಲಶಾಭಿಷೇಕ, 10 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ 1 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯಾಗಿ, ಬಳಿಕ ಅನ್ನಸಂತರ್ಪಣೆ ಜರಗಿತು.
ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.