ನಂದಾವರ : ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಹಲವು ವರ್ಷಗಳಿಂದ ಅನಾರೋಗ್ಯ ಬಳಲುತಿದ್ದು, ಇಂದು (ಮಾ.15) ಶನಿವಾರ ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದವರಾದ ವಿದ್ವಾಂಸ ಡಾ.ವಾಮನ ನಂದಾವರರವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು.
ಇವರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಪದವಿ ವ್ಯಾಸಂಗವನ್ನು ಮಾಡಿದ್ದು, ನಂತರ ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿಎಡ್, ಕರ್ನಾಟಕ ವಿವಿಯಿಂದ ಎಂ.ಎ.ಕನ್ನಡ ಪದವಿ ಗಳಿಸಿದ್ದರು. ಇವರು ಮಂಡಿಸಿದ್ದ ಕೋಟಿ ಚನ್ನಯ ಜಾನಪದೀಯ ಅಧ್ಯಯನ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ದೊರಕಿದೆ.