ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಶನಿವಾರ ಹಾಗೂ ಭಾನುವಾರ ನಡೆಯಿತು.

ಶನಿವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾಮೃತ್ಯುಂಜಯ ಹೋಮ, ಮಧ್ಯಾಹ್ನ ರಕ್ತಶ್ವರಿ, ಗುಳಿಗ ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಅನ್ನಸಂತರ್ಪಣೆ, ಸುಡುಮದ್ದು ಪ್ರದರ್ಶನ, ವಸಂತ ಕಟ್ಟೆ ಪೂಜೆ ನಡೆಯಿತು.
ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಅರ್ಚಕರು, ನೌಕರರು, ಭಕ್ತಾದಿಗಳು ಉಪಸ್ಥಿತರಿದ್ದರು.
ಇಂದು ಶ್ರೀ ದೇವಳದಲ್ಲಿ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು.