ಮಂಗಳೂರು : ಚಿರತೆಯೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ (ಮಾ.೧೬) ಕಿನ್ನಿಗೋಳಿ ಸಮೀಪದ ಉಳವಾಡಿಯಲ್ಲಿ ನಡೆದಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿನ್ನಿಗೋಳಿ ಸುತ್ತಮುತ್ತ ಹಲವು ಬಾರಿ ಚಿರತೆ ಕಂಡು ಬಂದಿದ್ದು, ಸಾಕು ನಾಯಿಗಳು ಚಿರತೆಗೆ ಆಹಾರವಾಗಿವೆ ಎನ್ನಲಾಗಿದೆ.
ಚಿರತೆ ಓಡಾಡುವ ದೃಶ್ಯಗಳು ಸಿ.ಸಿ. ಟಿವಿಯಲ್ಲಿ ಸೆರೆಯಾಗಿದ್ದು, ಕೆಲ ತಿಂಗಳ ಹಿಂದೆ ಮೂಲ್ಕಿಯಲ್ಲಿ ಮನೆಯೊಳಗೆ ಚಿರತೆ ನುಗ್ಗಿದೆ ಎಂದು ತಿಳಿದು ಬಂದಿದೆ.