ಪುತ್ತೂರು: ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ಪುತ್ತೂರು ನಂದಿ ರಥಯಾತ್ರೆ ಸಂಚಲನ ಸಮಿತಿ ವತಿಯಿಂದ ಭಾನುವಾರ ಪುತ್ತೂರಿಗೆ ಆಗಮಿಸಿದ ನಂದಿ ರಥ ಯಾತ್ರೆಗೆ ದರ್ಬೆಯಲ್ಲಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.
ದರ್ಬೆಯಲ್ಲಿ ಎಡನೀರು ಸಂಸ್ಥಾನದ ಶ್ರೀ ಸಚ್ಚೇದಾನಂದ ಭಾರತೀ ಶ್ರೀಪಾಂಗಳವರು ದೇಶಿ ನಂದಿಗೆ ಹಾರಾರ್ಪಣೆ ಮಾಡಿ ಶ್ರೀ ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚಣೆ ಮಾಡಿದರು.
ಡಾ. ಸಚಿನ್ ಶಂಕರ್ ಹಾರಕೆರೆಯವರು ತೆಂಗಿನ ಕಾಯಿ ಒಡೆಯುವ ಮೂಲಕ ನಂದಿ ರಥಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭ ಶಂಖನಾದ, ಚೆಂಡೆಯ ಸದ್ದು, ಕುಣಿತ ಭಜನೆ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು.