ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಡಮಂಗಲ ಮರ್ದೂರಡ್ಕ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ವಿಶ್ವನಾಥ ಮೃತಪಟ್ಟವರು.
ವಿಶ್ವನಾಥರು ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ನೋಡುತ್ತಿದ್ದಾಗ ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.