ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಮಾಡಿ ಸಿಕ್ಕಿಬಿದ್ದರುವ ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಕುಲ ಅನುರಾಧ ಎಂಬವರು ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಯತ್ನಾಳ್ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್ಎಸ್ ಸೆಕ್ಷನ್ 79 ಅಡಿ ಎಫ್ಐಆರ್ ದಾಖಲಾಗಿದೆ.
ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ ಅದನ್ನು ಬಚ್ಚಿಟ್ಟಿದ್ದಳು ಎಂದು ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರು ಯಾರು ಎನ್ನುವುದು ನನಗೆ ಗೊತ್ತು. ಶೀಘ್ರವೇ ವಿಧಾನ ಸಭೆಯಲ್ಲಿ ಬಹಿರಂಗ ಪಡಿಸುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿ ಭಾರಿ ಸಂಚಲನ ಮೂಡಿಸಿದ್ದರು. ಆದರೆ ಇಷ್ಟರ ತನಕ ಯತ್ನಾಳ್ ಸಚಿವರ ಹೆಸರನ್ನು ಬಹಿರಂಗಪಡಿಸಿಲ್ಲ.
ಯತ್ನಾಳ್ ಹೇಳಿಕೆಗೆ ಸಚಿವರು ಹಾಗೂ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿ ತಾಕತ್ ಇದ್ರೆ ಹೆಸರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದರು.
ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಯತ್ನಾಳ್ ವಿರುದ್ಧ ಎಫ್ಐಆರ್
