ಪುತ್ತೂರು: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರಸ್ತುತ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿನ ಬಾಲಕರ ತಂಡವು ದ್ವಿತೀಯ ಹಾಗೂ ಬಾಲಕಿಯರ ತಂಡವು ತೃತೀಯ ಸ್ಥಾನ ಪಡೆದುಕೊಂಡಿದೆ.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ದಿವ್ಯಾ ಆಲ್ ರೌಂಡರ್ ಪ್ರಶಸ್ತಿಯನ್ನು ಹಾಗೂ ಬಾಲಕರ ವಿಭಾಗದಲ್ಲಿ ಪ್ರಥಮ ಬಿಎಸ್ ಸ್ಸಿ ವಿದ್ಯಾರ್ಥಿ ಸುಹಾಸ್ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಅವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿಕುಮಾರಿ ಪಿ.ಸಿ, ಯತೀಶ್ ಬಾರ್ತಿಕುಮೇರು ಹಾಗೂ ಕಾರ್ತಿಕ್ ತರಬೇತಿ ನೀಡಿದ್ದಾರೆ.