ಕಾಣಿಯೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಪಡೆದಿದ್ದಾರೆ.
ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆಯಲ್ಲಿ ದ್ವಿತೀಯ ಬಿಕಾಂನ ರಂಜನ್ ಕೆ.ಎಸ್., ಪ್ರಥಮ ಬಿಎ ಯ ರಶ್ಮಿ ಎಲ್. ಪ್ರಥಮ ಬಿ.ಎ. ಪ್ರಥಮ ಬಹುಮಾನ ಪಡೆದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಶಂಕರ್ ಭಟ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.