ಮೇ 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಉಜಿರೆ : ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಶನಿವಾರ ವಿವಾಹ ನೋಂದಣಿ ಕಾರ್ಯಾಲಯವನ್ನು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಮಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು. ಧರ್ಮಸ್ಥಳದಲ್ಲಿ ಇಲ್ಲಿಯವರೆಗೆ ಒಟ್ಟು 12,576 ಜೊತೆ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಿದೆ. ಸಾಮೂಹಿಕ ವಿವಾಹದಲ್ಲಿ ಮುದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top