ಪುತ್ತೂರು: ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಎಲ್ಲಾ ಸೌಲಭ್ಯಗಳೊಂದಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಿದೆ.
ರಾಜ್ಯ ಶಿಷ್ಟಾಚಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ – 2 ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ರಾಜ್ಯ ಸರಕಾರ ನೀಡಿದಂತಾಗಿದೆ.
ಸಂಪುಟ ದರ್ಜೆಯ ಸ್ಥಾನಮಾನವು ರಾಜ್ಯದ ಸಂಪುಟ ದರ್ಜೆಯ ಸಚಿವರಿಗೆ ಸರಿಸಮಾನವಾದ ಸ್ಥಾನಮಾನ. ಸಚಿವರುಗಳಿಗೆ ಸಿಗುವ ಎಲ್ಲಾ ಸೌಲಭ್ಯಗಳು, ಅಧಿಕಾರಗಳು ಇನ್ನು ಮುಂದೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೂ ಇರಲಿದೆ ಎಂದು ಹೇಳಲಾಗಿದೆ.