ಸುಳ್ಯ: ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ.
ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತಪಟ್ಟವರು.
ಜನಾರ್ದನ ಅವರು ಮಾ.22 ರಂದು ಮಾವಿನ ಮರವೇರಿ ಮಾವಿನಕಾಯಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಮರದಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ.