ಬೆಳ್ತಂಗಡಿ: ಕಾರು ಓವರ್ ಟೇಕ್ ಮಾಡುವ ಸಂದರ್ಭ ಬೈಕೊಂದು ರಸ್ತೆಗೆ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ (42) ಅಪಘಾತದಿಂದ ಮೃತಪಟ್ಟವರು.
ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ