ಪುತ್ತೂರು: ಮಹಿಳೆ ಮೇಲೆ ತಲ್ವಾರ್ ಬೀಸಿ ಹಲ್ಲೆಗೆ ಯತ್ನಿಸಿದ ಘಟನೆ ಸಂಪ್ಯದ ಮೂಲೆ ಎಂಬಲ್ಲಿ ಇಂದು ನಡೆದಿದೆ.
ಹಸೈನಾರ್ ಎಂಬಾತ ಸಂಪ್ಯದಮೂಲೆ ನಿವಾಸಿ ರೇಖನಾಥ್ ರೈ ಅವರ ಸಹೋದರಿ ಪುಷ್ಪಾವತಿ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.