ಪುತ್ತೂರು: ಹಿರಿಯ ಯಕ್ಷಗಾನ ಗಾನ ಅರ್ಥಧಾರಿ, ಸಂಶೋಧಕ, ಸಂಸ್ಕೃತಿ ಚಿಂತಕ, ನಿವೃತ್ತ ಪ್ರಾಚಾರ್ಯ ಡಾ. ಎಂ. ಪ್ರಭಾಕರ ಜೋಶಿಯವರನ್ನು ‘ಸ್ವರ್ಣ ಸಾಧನಾ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಳೆದ 3 ವರ್ಷಗಳಿಂದ ನಿವೃತ್ತ ನೌಕರರ ಸಂಘದ ಸ್ವರ್ಣ ಮಹೋತ್ಸವದ ಸವಿನೆನಪಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
2022 ರಲ್ಲಿ ಪ್ರಥಮವಾಗಿ ಕೃಷಿ ಮತ್ತು ನೀರಾವರಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಪದ್ಮಶ್ರೀ ಪುರಸ್ಕತ ಅಮೈ ಮಹಾಲಿಂಗ ನಾಯ್ಕ. 2023 ರಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕತಿಕ ಕ್ಷೇತ್ರದ ಸಾಧಕ ಡಾ. ಎಂ. ಮೋಹನ್ ಆಳ್ವ. 2024ರಲ್ಲಿ ಸಾಹಿತ್ಯ ಕ್ಷೇತ್ರದ ಸಾಧಕರಾದ ಸುಬ್ರಾಯ ಚೊಕ್ಕಾಡಿಯವರಿಗೆ ನೀಡಲಾಗಿದೆ.
ಡಾ. ಪ್ರಭಾಕರ ಜೋಶಿಯವರು ಶಿಕ್ಷಣ, ಯಕ್ಷಗಾನ , ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ, ಸಾಹಿತ್ಯ, ಸಂಸ್ಕೃತಿ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಬಹುಭಾಷಾ ಪಂಡಿತರು. 20 ಕ್ಕೂ ಹೆಚು ಕೃತಿಗಳನ್ನು ರಚಿಸಿದ ಅವರು ಅಷ್ಟೇ ಕೃತಿಗಳನ್ನು ಸಂಪಾದಿಸಿದ್ದಾರೆ. 50 ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ‘ಸ್ವರ್ಣ ಸಾಧನಾ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ 1 ರಂದು ಜೈನ ಭವನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.