ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಏ 04 ರಿಂದ ಏ 10 ರವರೆಗೆ ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರ ಮೂಕಮಲೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಿಬಿರವು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ತಿಳಿಸಿದರು.
ಕಾಲೇಜಿನ ರಕ್ಷಕ ಶಿಕ್ಷಕರ ಸಂಘದ ಅಧ್ಯಕ್ಷೆ ಸಾಯಿಗೀತ ಕೂಜುಗೋಡು, ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಭಾರತಿ ಸಾಲ್ತಾಡಿ, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರಿನ ಎಸ್.ಡಿ.ಎಂ.ಸಿ ಸದಸ್ಯ ಸುಧೀರ್ ಅಮೆ , ಕಾರ್ಯಾಧ್ಯಕ್ಷ ಕೇಶವ ಗೌಡ ಕಾಂತಿಲ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕೆ ಎಸ್ ಎಸ್ ಕಾಲೇಜಿನ ಎನ್ ಎಸ್. ಎಸ್ ಕಾರ್ಯಕ್ರಮಾಧಿಕಾರಿ ಆರತಿ.ಕೆ ಸ್ವಾಗತಿಸಿ, ಗುತ್ತಿಗಾರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ ವಂದಿಸಿದರು. ಜೀವಿತ್ ಕಾರ್ಯಕ್ರಮ ನಿರೂಪಿಸಿದರು.