ಪುತ್ತೂರು: ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀತಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಂಗಳವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಶಾಲೆಗಳನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಸ್ಟಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ನೀಡುವ ಕೆಲಸ ಆಗಿದೆ. ಜತೆಗೆ ಮಕ್ಕಳು ಮೊಬೈಲ್ ಫೋನ್‍ಗೆ ಬೇಗ ಹೊಂದಿಕೊಳ್ಳುತ್ತಾರೆ ಎಂಬ ಕಾರಣಕ್ಕೂ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ಮಕ್ಕಳ ಬೆಳವಣಿಗೆಗೆ ಬೇಕಾದ ಮೊಟ್ಟೆ, ಚಿಕ್ಕಿ ಕೊಡುವ ಕೆಲಸ ಸರಕಾರ ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಜಯರಾಮ್ ಪೂಜಾರಿ, ಜಿಲ್ಲಾ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,, ನರಿಮೊಗರು ಗ್ರಾಪಂ ಉಪಾಧ್ಯಕ್ಷರ ಸುಧಾಕರ ಕುಲಾಲ್, ಗ್ರಾಪಂ ಸದಸ್ಯರಾದ ಎಮ್ ದಿನೇಶ್ ಗೌಡ, ತಾರಾನಾಥ ಆನಡ್ಕ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವೀರ ಮಂಗಲ ಶಾಂತಿಗೋಡು ನರಿಮೊಗರು ಇಲ್ಲಿನ ಸಂಘಟನಾ ಪ್ರಮುಖರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ೀ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಸುವರ್ಣ , ಸದಸ್ಯರು ಹಾಗೂ ಶಿಕ್ಷಕ ವೃಂದದವರು ಶಾಸಕರಿಗೆ ಗೌರವಾರ್ಪಣೆ ಮಾಡಿದರು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಫೆಲ್ಸಿಟ ಡಿಕುನ್ಹಾ ವಂದಿಸಿದರು. ಶಿಕ್ಷಕಿಯರಾದ ಮಾಲತಿ ಸೌಮ್ಯ ಹಾಗೂ ಲೀಲಾವತಿ ಸಹಕರಿಸಿದರು.