ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) 2025ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ವಾರವೇ ಪ್ರಕಟಸುವ ನಿರೀಕ್ಷೆ ಇದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು.
ಪತ್ರಿಕಾಗೋಷ್ಠಿ ಮೂಲಕ ಕೆಎಸ್ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್ಲೈನ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿದೆ. karresults.nic.in ಮತ್ತು kseab.karnataka.gov.in ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.inಗೆ ಹೋಗಿ ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್‌ವರ್ಡ್ ನಮೂದಿಸಬೇಕು. Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ. ಅಲ್ಲಿಯೇ ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಇರುತ್ತದೆ. 1171 ಪರೀಕ್ಷಾ ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.