ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆ ವತಿಯಿಂದ ಸರಕಾರಿ ನೌಕರರ ದಿನಾಚರಣೆ ಅಂಗವಾಗಿ ಪುತ್ತೂರು ತಾಲೂಕು ವ್ಯಾಪ್ತಿಯ ಸರಕಾರಿ ನೌಕರರಿಗೆ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮಾಹಿತಿ ಕಾರ್ಯಾಗಾರ ಭಾನುವಾರ ದರ್ಬೆ ಆಫೀಸರ್ಸ್ ಕ್ಲಬ್‍ನಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ.ಎಸ್. ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರಕಾರಿ ನೌಕರರಿಗೆ ಮುಖ್ಯ ಸಮಸ್ಯೆಯಾಗಿರುವ ಎನ್‍ಪಿಎಸ್‍ಜ್ಯಾರಿಯನ್ನು ನ್ನು ರದ್ದುಪಡಿಸಿ ಒಪಿಎಸ್‍ಜ್ಯಾರಿಗೊಳಿಸುವಂತೆ ನಮ್ಮ ಮುಂದಿನ ಬಹುಮುಖ್ಯ ಹೋರಾಟವಾಗಿದ್ದು, ಎಲ್ಲಾ ಸರಕಾರಿ ನೌಕರರು, ಸಂಘಟನೆಗಳು ಒಟ್ಟಾಗಿ ಹೋರಾಟದಲ್ಲಿ ಕೈಜೋಡಿಸುವಂತೆ ಕರೆ ನೀಡಿದರು. ಈಗಾಗಲೇ ಜಿಲ್ಲಾ ಸಂಘದ ಪ್ರತಿಯೊಂದು ಕಾರ್ಯ ಯೋಜನೆಗಳಿರಲಿ, ಹೋರಾಟವಿರಲಿ ಪುತ್ತೂರು ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಅವರ ಸಹಕಾರ ಸಾಕಷ್ಟಿದೆ ಎಂದ ಅವರು, ಸರ್ವೋತ್ತಮ ಪ್ರಶಸ್ತಿಗೆ ವೆಬ್‍ಸೈಟ್‍ಬಿಡುಗಡೆಗೊಂಡಿದ್ದು, ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವವರು ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಹಾಗೆಯೇ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಲಿದ್ದು, ಜಿಲ್ಲಾ ಮಟ್ಟದಲ್ಲಿ ವಿಜೇತರಾದವರು ತಮ್ಮ ಪ್ರಮಾಣ ಪತ್ರ ಸಲ್ಲಿಸಿ ಹೆಸರು ನೊಂದಾಯಿಸಿಕೊಳ್ಳುವಂತೆ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಂಘದ ಪುತ್ತೂರು ತಾಲೂಕು ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಮಾತನಾಡಿ, ಸರಕಾರಿ ನೌಕರರ ಸಂಘದವರಿಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು. ನಾವೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದರೆ ಕಾರ್ಯಕ್ರಮ ಯಾರಿಗೆ ಎಂದು ಪ್ರಶ್ನಿಸಿದರು. ಕಾರ್ಯಕ್ರಮ ಸಂಘದ ಸದಸ್ಯರು ಹಾಗೂ ಕುಟುಂಬದವರ ಒಳಿತಿಗಾಗಿ ಇರುವುದು ಎಂದ ಅವರು, ವೇತನ ಪ್ಯಾಕೇಜ್ ಸಂಘದ ಹೋರಾಟದ ಫಲವಾಗಿದೆ. ಈ ನಿಟ್ಟಿನಲ್ಲಿ ಇಂದು ವಿವಿಧ ಬ್ಯಾಂಕಿನವರು ಮಾಹಿತಿ ನೀಡಲು ಬಂದಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.
ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎ.ರಾಜೇಶ್ ರೈ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಪುತ್ತೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುರೇಶ್ ಕುಮಾರ್ ಶುಭ ಹಾರೈಸಿದರು.
ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ನಾಗೇಶ್ ಪಾಟಾಳಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಬ್ರಹಾಂ ಎಸ್.ಎ., ಸರಕಾರಿ ಪದವಿಪೂರ್ವ ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ನಾಗೇಶ್ ಎಂ., ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷೆ ಗಾಯತ್ರಿ, ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಲೀಲಯ್ಯ ಎಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುನಿಲ್ ವಿ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಪ್ ಬರೋಡ ಹಾಗೂ ಇಂಡಿಯನ್ ಬ್ಯಾಂಕ್ ನ ಪ್ರಬಂಧಕರು ತಮ್ಮ ತಮ್ಮ ಬ್ಯಾಂಕಿನ ಕುರಿತು ಮಾಹಿತಿ ನೀಡಿದರು.
ಸಂಘದ ಕೋಶಾಧಿಕಾರಿ ಚಂದ್ರ ನಾಯ್ಕ ಸ್ವಾಗತಿಸಿದರು. ಕೆಯ್ಯೂರು ಕೆಪಿಎಸ್‍ಶಾಲಾ ಉಪಪ್ರಿನ್ಸಿಪಾಲ್ ವಿನೋದ್‍ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಶಿಕ್ಷಣ ವಿಭಾಗದ ಮಹಮ್ಮದ್ ಅಶ್ರಫ್‍ಕೆ. ವಂದಿಸಿದರು. ಬಳಿಕ ಸರಕಾರಿ ನೌಕರರ ಸಂಘದ ಸದಸ್ಯರಿಗೆ ವಿವಿಧ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳು ಜರಗಿತು.