ಕಳಿಯ ಗ್ರಾಮದ ಗೇರುಕಟ್ಟೆ ಕುಂಟಿನಿಯ ವೈದಿಕ ಮನೆತನದ ಸುಬ್ರಾಯ ಭಟ್ಟರ ಪುತ್ರ ಹರಿಪ್ರಸಾದ್ (68 ವರ್ಷ) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.
ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ ನಿವೃತ್ತರಾಗಿದ್ದ ಇವರು ಬಳಿಕ ಉಡುಪಿ ಪುತ್ತಿಗೆ ಮಠದಲ್ಲಿ ಸೇವಾ ಕಾರ್ಯದಲ್ಲಿ ನಿರತರಾಗಿದ್ದು ಕೋಟಿಗೀತಾ ಲೇಖನ ಯಜ್ಞದ ಪ್ರಚಾರಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಉತ್ತಮ ವಾಲಿಬಾಲ್ ಆಟಗಾರರಾಗಿದ್ದ ಇವರು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು .ಯಕ್ಷಗಾನ ಕಲಾವಿದನಲ್ಲದಿದ್ದರೂ ತನ್ನ ಗೇರುಕಟ್ಟೆ ಮನೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸಂಘದ ವಾರದ ಕೂಟಗಳನ್ನು ಹಲವು ವರ್ಷಗಳ ಕಾಲ ನಡೆಸಿಕೊಂಡು ಬಂದಿದ್ದರು. ನಾಳ ಜಾತ್ರೆ, ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭದಲ್ಲಿ ತಾಳಮದ್ದಳೆಯನ್ನು ಸಂಘಟಿಸುತ್ತಿದ್ದ ಕಲಾ ಪ್ರೇಮಿಯಾಗಿದ್ದರು. ಪತ್ನಿ ವಿಜಯ ಪ್ರಸಾದ್ ಮತ್ತು ಎರಡು ಗಂಡು ಮಕ್ಕಳನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘವು ಸಂತಾಪವನ್ನು ಸೂಚಿಸಿದೆ.