ಬೆಂಗಳೂರು: ಮಾ.8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರು ಮಹಾನಗರ ಸಾರಿಗೆ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ. ಮಾ.7 ರ ಮಧ್ಯರಾತ್ರಿ 12 ಗಂಟೆಯಿಂದ ಮಾ.8 ಮಧ್ಯರಾತ್ರಿ 12 ಗಂಟೆಯವರೆಗೆ, ಎಸಿ ವೋಲ್ವೋ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ಹೀಗಾಗಿ ನಾಳೆ ಬಿಎಂಟಿಸಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ನಿತ್ಯ ಬೆಂಗಳೂರಿನಲ್ಲಿ 10,21,645 ಮಹಿಳಾ ಪ್ರಯಾಣಿಕರು ಸಂಚಾರ ಮಾಡುತ್ತಾರೆ.
ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಸರ್ಕಾರದ ಮಯೂರ ಗ್ರೂಪ್ ಆಫ್ ಹೊಟೇಲ್‌ಗಳಲ್ಲಿ ಭರ್ಜರಿ ರಿಯಾಯಿತಿ ನೀಡಿದೆ. ಸರ್ಕಾರಿ ಹೋಟೆಲ್‌ಗಳಿಗೆ ಭೇಟಿ ನೀಡುವ ಮಹಿಳೆಯರಿಗೆ ವಿಶೇಷ ಕೊಡುಗೆಯನ್ನು ಪ್ರಕಟಿಸಿದ್ದು, ಹೋಟೆಲ್‌ಗಳ ರೂಮ್ ಬುಕ್ಕಿಂಗ್‌ಗಳಲ್ಲಿ ಶೇಕಡಾ 50 ರಷ್ಟು ಹಾಗು ಫುಡ್ ಮೇಲೆ ಶೇಕಡಾ 20 ರಷ್ಟು ಡಿಸ್ಕೌಂಟ್ ನೀಡಿದೆ.ಮಾರ್ಚ್ 6 ರಿಂದ ಮಾರ್ಚ್ 10ರ ವರೆಗೆ ಈ ಕೊಡುಗೆಯನ್ನು ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ತಿಳಿಸಿದೆ.
ರಾಜ್ಯದ ಮೈಸೂರು, ಹಂಪಿ, ಶ್ರೀರಂಗಪಟ್ಟಣ, ಆಲಮಟ್ಟಿ, ಮಡಿಕೇರಿ, ನಂದಿ ಬೆಟ್ಟ, ವಿಜಯಪುರ ಹಾಗೂ ಊಟಿಯಲ್ಲೂ ಸಹ ಮಯೂರ ಹೋಟೆಲ್‌ಗಳಿವೆ. 06.03.2023 ರಿಂದ 10.03.2023 ರವರೆಗೆ ಈ ಆಫರ್ ಇರಲಿದ್ದು, ಸಿಂಗಲ್, ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರಯಾಣಿಸುವ ಮಹಿಳಾ ಪ್ರವಾಸಿಗರಿಗೆ 50% ರಿಯಾಯಿತಿ ನೀಡಲಾಗುತ್ತಿದೆ. ಆದ್ದರಿಂದ ಎಲ್ಲಾ ಮಹಿಳಾ ಪ್ರವಾಸಿಗರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಎಂದು ಕೆಎಸ್‌ಟಿಡಿಸಿ ಮನವಿ ಮಾಡಿಕೊಂಡಿದೆ.