ನಾಗಾಲ್ಯಾಂಡ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನೆಫಿಯು ರಿಯೊ
ಗುವಾಹಟಿ : ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಮಾ. 7 ರಂದು ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಶಿಲ್ಲಾಂಗ್‌ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಪ್ರೆಸ್ಟೋನ್ ಟೈನ್‌ಸಾಂಗ್ ಅವರು ಉಪಮುಖ್ಯಮಂತ್ರಿಯಾಗಿ ಮತ್ತು ಕೆಲವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ನಾಗಾಲ್ಯಾಂಡ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನೆಫಿಯು ರಿಯೊ
ನಾಗಾಲ್ಯಾಂಡ್ನ ನೂತನ ಮುಖ್ಯಮಂತ್ರಿಯಾಗಿ ನೆಫಿಯು ರಿಯೊ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ಮತ್ತೊಮ್ಮೆ ಎನ್‌ಡಿಪಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ. 60 ಸ್ಥಾನಗಳನ್ನು ಹೊಂದಿರುವ ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ ಮೈತ್ರಿಕೂಟ 37 ಸ್ಥಾನಗಳನ್ನು ಗೆದ್ದಿದೆ. ಎನ್‌ಡಿಪಿಪಿ 25, ಬಿಜೆಪಿ 12 ಸ್ಥಾನಗಳನ್ನು ಪಡೆದುಕೊಂಡಿದೆ. ಇದಲ್ಲದೆ ಎನ್‌ಸಿಪಿ 7, ಎನ್‌ಪಿಪಿ 5, ಸ್ವತಂತ್ರರು 4, ಲೋಕ ಜನಶಕ್ತಿ ಪಕ್ಷ, ಎನ್‌ಪಿಎಫ್ ಮತ್ತು ಆರ್‌ಪಿಐ 2-2 ಸ್ಥಾನಗಳನ್ನು ಪಡೆದಿವೆ. ಜೆಡಿಯು ತನ್ನ ಖಾತೆಯಲ್ಲಿ ಒಂದು ಸ್ಥಾನ ಪಡೆದಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.