ಹಿರಿಯ ನಟ ಬ್ಯಾಂಕ್‌ ಜನಾರ್ದನ್‌ ನಿಧನ

800ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಪೋಷಕ ನಟ

ಬೆಂಗಳೂರು : 800ಕ್ಕೂ ಅಧಿಕ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ದನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.
1949ರಲ್ಲಿ ಬ್ಯಾಂಕ್ ಜನಾರ್ದನ್ ಚಿತ್ರದುರ್ಗದ ಹೊಳಲ್​ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್​..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ನಟಿಸಿದರು. 2016ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿರಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು.

ಜನಾರ್ದನ್ ಹೆಸರಿನ ಮುಂದೆ ಬ್ಯಾಂಕ್ ಎಂಬ ಉಪಾಧಿ ಸೇರಿಕೊಳ್ಳಲು ಕಾರಣವಿದೆ. ಜನಾರ್ದನ್ ಚಿತ್ರದುರ್ಗದ ಸಮೀಪದ ಹೊಳಲ್​ಕೆರೆ ಬಳಿಯ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಕಲೆಯ ಬಗ್ಗೆ ಆಸಕ್ತಿ ಇತ್ತು. ಹೀಗಾಗಿ ನಾಟಕಗಳನ್ನು ಮಾಡಿಕೊಂಡಿದ್ದರು. ಅವರ ನಾಟಕವನ್ನು ನೋಡಿ ಧೀರೇಂದ್ರ ಗೋಪಾಲ್ ಬೆಂಗಳೂರಿಗೆ ಬರುವಂತೆ ಅವರು ಹೇಳಿದ್ದರು. ನಂತರ ಒಂದೂವರೆ ವರ್ಷ ಬಿಟ್ಟು ಜನಾರ್ದನ್ ಬೆಂಗಳೂರಿಗೆ ಬಂದರು. ಅವರು ‘ಊರಿಗೆ ಉಪಕಾರಿ’ ಸಿನಿಮಾದಲ್ಲಿ ವಜ್ರಮುನಿ ಬಾಡಿಗಾರ್ಡ್ ಪಾತ್ರ ಮಾಡಿದರು. ವಿಷ್ಣುವರ್ಧನ್ ಅವರು ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಇದ್ದರು. ಜನಾರ್ದನ್ ಅವರು ಸುಮಾರು 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.































 
 

ನಾಟಕಗಳಿಂದ ಆರಂಭ ಆದ ಅವರ ಬದುಕು ನಂತರ ಸಿನಿಮಾಗಳತ್ತ ಹೊರಳಿತು. ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿಕೊಂಡೇ ಅವರು ಆರಂಭದಲ್ಲಿ ಚಿತ್ರರಂಗದಲ್ಲಿ ಸಮಯ ಕಳೆದರು. ನಂತರದ ದಿನಗಳಲ್ಲಿ ಅವರಿಗೆ ದೊಡ್ಡ ದೊಡ್ಡ ಆಫರ್​ಗಳು ಬರೋಕೆ ಆರಂಭ ಆದವು. ಅವರು ಚಿತ್ರರಂಗದಲ್ಲಿ ಬೇಡಿಕೆಯ ಕಲಾವಿದನಾಗಿ ಗುರುತಿಸಿಕೊಂಡಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top