ಪುತ್ತೂರು: ಕಾರ್ಜಾಲು ಶ್ರೀ ಧೂಮಾವತಿ ದೈವದ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಮಾ.11 ರಂದು ನಡೆಯಲಿದ್ದು, ಇದರ ಅಂಗವಾಗಿ ಇಂದು ( ಮಾ.8 ) ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ನಡೆಯಲಿದೆ.
ಸಂಜೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿಯಿಂದ ದರ್ಬೆ ವೃತ್ತದ ತನಕ ಆಮಂತ್ರಣ ಪತ್ರ ವಿತರಿಸಲಾಗುವುದು.
ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಕಲ್ಲೇಗ ರೂರಲ್ ಡೆವಲಪ್ ಮೆಂಟ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಸಂಜೀವ ಕಲ್ಲೇಗ ಚಾಲನೆ ನೀಡಲಿದ್ದಾರೆ ಎಂದು ಕಾರ್ಜಾಲು ದೊಂಪದ ಬಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಜೈನ್ ತಿಳಿಸಿದ್ದಾರೆ.