ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕಡೇಶಿವಾಲಯ, ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ, ಕಡೇಶಿವಾಲಯ ಚಿಂತಾಮಣಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ. ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕಡೇಶಿವಾಲಯ ಜಾತ್ರೋತ್ಸವದ ಸಂದರ್ಭದ ಪ್ರಯುಕ್ತ ಏ.13 ಭಾನುವಾರದಂದು ಸ್ವಚ್ಛತಾ ಕಾರ್ಯಕ್ರಮ ಸೇವೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು, ವಲಯ ಮೇಲ್ವಿಚಾರಕರು, ಸಂಯೋಜಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.