ಶುಕ್ರವಾರ ಅಡ್ಯಾರಿನಲ್ಲಿ ವಕ್ಫ್‌ ಕಾಯ್ದೆ ವಿರುದ್ಧ ಬೃಹತ್‌ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗ ಬಳಸಲು ಸೂಚನೆ

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏಪ್ರಿಲ್ 18ರಂದು ಅಡ್ಯಾರ್‌ ಕಣ್ಣೂರಿನಲ್ಲಿ ಮುಸ್ಲಿಮರ ಬೃಹತ್‌ ಪ್ರತಿಭಟನೆ ನಡೆಯಲಿದೆ. ಕನಿಷ್ಠ 50 ಸಾವಿರ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಹೇಳಿದ್ದು, ಈ ಹಿನ್ನೆಲೆಯಲ್ಲಿ, ಶುಕ್ರವಾರ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರತಿಭಟನೆಯಿಂದಾಗಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9ರವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಡೀಲ್-ಕಣ್ಣೂರು-ಅಡ್ಯಾರ್-ಸಹ್ಯಾದ್ರಿ-ಅರ್ಕುಳ ಮಾರ್ಗಗಳಲ್ಲಿ ತೀವ್ರ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸರಾಗ ಓಡಾಟಕ್ಕಾಗಿ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಪೊಲೀಸರು ಸೂಚನೆ ನೀಡಿದ್ದಾರೆ.





























 
 

ಮೆಲ್ಕಾರು ಜಂಕ್ಷನ್-ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್-ಬೊಳಿಯಾರ್-ಮುಡಿಪು-ದೇರಳಕಟ್ಟೆ-ತೊಕ್ಕೊಟ್ಟು ಮೂಲಕ ಸಂಚರಿಸಲು ಸೂಚಿಸಿದ್ದಾರೆ.
ಬಿ.ಸಿ.ರೋಡ್ ಪೊಳಲಿ ದ್ವಾರ-ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್-ನೀರುಮಾರ್ಗ-ಬೈತುರ್ಲಿ-ಕುಲಶೇಖರ-ನಂತೂರು ಮೂಲಕ ಸಂಚರಿಸುವುದು.
ವಳಚ್ಚಿಲ್ ಜಂಕ್ಷನ್-ಬಿ.ಸಿ.ರೋಡ್/ತುಂಬೆ/ ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್‌ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು-ನೀರುಮಾರ್ಗ-ಬೈತುರ್ಲಿ-ನಂತೂರು ಮೂಲಕ ಸಂಚರಿಸುವುದು.
ಅಡ್ಯಾರ್ ಕಟ್ಟೆ-ಬಿ.ಸಿ.ರೋಡ್/ತುಂಬೆ/ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್-ಕೊಣಾಜೆ-ದೇರಳಕಟ್ಟೆ-ತೊಕ್ಕೊಟ್ಟು ಮೂಲಕ ಸಂಚರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top