ಪುತ್ತೂರು: ಚಲಿಸುತ್ತಿರುವಾಗ ಬೈಕ್ ಮೇಲೆ ಮರದ ಗೆಲ್ಲು ಬಿದ್ದು ಸವಾರನಿಗೆ ಗಾಯಗಳಾಗಿರುವ ಘಟನೆ ಸಾಲ್ಮರ ಜಂಕ್ಷನ್ ಬಳಿ ನಡೆದಿದೆ.
ಮಾವಿನ ಮರದ ಗೆಲ್ಲು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ತನ್ನೀರ್ ತಾರಿಗುಡ್ಡೆ ಎಂಬವರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.