ಮಂಗಳೂರು: ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಮಂಗಳೂರು ಯುವ ಘಟಕದ ವತಿಯಿಂದ ಒಕ್ಕಲಿಗರ ಪ್ರೀಮಿಯರ್ ಲೀಗ್ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಓವರ್ ಆರ್ಮ್ ಪುರುಷರ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟಕ್ಕೆ ಶನಿವಾರ ಸಂಜೆ ಚಾಲನೆ ನೀಡಲಾಯಿತು.

ಶ್ರೀ ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದರು.
ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕುರುಂಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಚೇಯರ್ ಮೆನ್ ಉಮೇಶ್ ಎಂ.ಪಿ. ದೀಪ ಪ್ರಜ್ವಲನೆ ಮಾಡಿದರು.
ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಟ್ರೋಫಿ ಅನಾವರಣ ಮಾಡಿದರು. ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಸೌಮ್ಯ ಸುಕುಮಾರ್ ಧ್ವಜಾರೋಹಣ ಮಾಡಿದರು. ಯುವ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.