ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಕಣಿವೆಯಲ್ಲಿ ಉಗ್ರರು ನಡೆಸಿದ ನಡೆದ ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್ ಎಂಬವರು ಬಲಿಯಾಗಿದ್ದು, ಇದರೊಂದಿಗೆ ಕರ್ನಾಟಕದ ಮೂವರು ಸಾವನ್ನಪ್ಪಿರುವುದು ದೃಢವಾಗಿದೆ. ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿದ್ದರು.
ಮಧುಸೂದನ್ ಅವರ ಸಾವಿನೊಂದಿಗೆ ಕರ್ನಾಟಕ ಮೂವರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈಗಾಗಲೇ ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಎಂಬವರು ಮೃತಪಟ್ಟಿದ್ದಾರೆ.
ವಿಮಾನ ನಿಲ್ದಾಣದಲ್ಲೇ ಮೋದಿ ಸಭೆ
ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಮರಳಿದ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಗೆ ಬಂದಿಳಿಯುತ್ತಿದ್ದಂತೆ ಸಭೆ ನಡೆಸಿದ್ದಾರೆ. ಬುಧವಾರ ಮುಂಜಾನೆ ಬಂದಿಳಿದ ಮೋದಿ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಂಕ್ಷಿಪ್ತ ಸಭೆ ನಡೆಸಿದರು.
ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಪೂರ್ವ ನಿಗದಿ ಕಾರ್ಯಕ್ರಮದ ಪ್ರಕಾರ ಇಂದು ರಾತ್ರಿ ಮೋದಿ ಮರಳಬೇಕಿತ್ತು. ಆದರೆ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಾದ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಮಂಗಳವಾರ ರಾತ್ರಿಯೇ ಭಾರತದತ್ತ ಪ್ರಯಾಣ ಬೆಳೆಸಿದ್ದರು.