ಬೆಳ್ಳಾರೆ: ದೇಶಭಕ್ತ ನಾಗರಿಕರು ಬೆಳ್ಳಾರೆ ವಲಯದಿಂದ ಕಾಶ್ಮೀರದ ಪಹಲ್ಗಾಮಾದಲ್ಲಿ ಉಗ್ರಗಾಮಿಗಳಿಂದ ಹತರಾದ ಹಿಂದೂ ಬಾಂಧವರಿಗೆ ಶ್ರದ್ಧಾಂಜಲಿ ಸಭೆ ಹಾಗೂ ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ಬೆಳ್ಳಾರೆಯಲ್ಲಿ ಶುಕ್ರವಾರ ಸಂಜೆ ನಡೆಯಿತು.
ಬೆಳ್ಳಾರೆ ಕೆಳಗಿನ ಪೇಟೆಯ ಶ್ರೀ ವೆಂಕಟ್ರಮಣ ದೇವಸ್ಥಾನದಿಂದ ಬಸ್ ನಿಲ್ದಾಣದ ವರೆಗೆ ನಾಗರಿಕರು ದೀಪ ಹಿಡಿದುಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಾಮಾಜಿಕ ಕಾರ್ಯಕತ‍್ ಮೋಹನ್ ದಾಸ್ ಬಲ್ಕಾಡಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
ಬೆಳ್ಳಾರೆ ಮತ್ತು ನಿಂತಿಕಲ್ಲಿನ ಎಲ್ಲಾ ಅಂಗಡಿ ಮಾಲಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ರಿಕ್ಷಾ ಚಾಲಕರು ಸಹಿತ ಇನ್ನಿತರ ವಾಹನದವರು ತಮ್ಮ ವಾಹನಗಳನ್ನು ನಿಲ್ಲಿಸಿ ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.