ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನರ್ಸರಿ ಬಳಿ ಲಾರಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಎ. 24ರಂದು ಸುಲ್ಕೇರಿ ನರ್ಸರಿ ಬಳಿ ನಡೆದಿದೆ.
ಲಾರಿ ಚಾಲಕನ ದುಡುಕುತನದಿಂದ ರಸ್ತೆಯ ಬಲಬದಿಗೆ ಚಲಾಯಿಸಿದ ಪರಿಣಾಮ ನಾರಾವಿ ಕಡೆಯಿಂದ ಬರುತ್ತಿದ್ದ ಕಾಯರ್ತಡ್ಕ ಗ್ರಾಮದ ಕಳಂಜ ಮರಕಡ ನಿವಾಸಿ ಗಣೇಶ್ ಗೌಡ (49ವ)ರವರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಅಪಘಾತದಿಂದ ಗಣೇಶ್ ಗೌಡರ ವಾಹನ ಜಖಂಗೊಂಡಿದರ ಜೊತೆಗೆ ಗಾಯವಾಗಿದೆ ಎನ್ನಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಹಾಗೂ ವಾಹನವನ್ನು ಏ.25 ರಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.