ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯದ, ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಡಾ.ಕೆ.ಶಿವರಾಮ ಕಾರಂತ ಅಧ್ಯಯನ ಕೇಂದ್ರ ಹಾಗೂ ಕನ್ನಡ ಮತ್ತು ಐಕ್ಯೂಸಿ ವಿಭಾಗದ ವತಿಯಿಂದ ನಿರಂಜನ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಏ.29 ಮಂಗಳವಾರ ಸಂಜೆ 3 ಗಂಟೆಗೆ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಎನ್. ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಖ್ಯಾತ ಬರಹಗಾರ, ಸಾಹಿತಿ ಡಾ.ಬಾಬು ಕೃಷ್ಣಮೂರ್ತಿ ಅವರಿಗೆ ನಿರಂಜನ ಪ್ರಶಸ್ತಿ ಹಾಗೂ ಬಹುಭಾಷಾ ವಿದ್ವಾಂಸ ಡಾ.ಡಿ.ಸದಾಶಿವ ಭಟ್ ಪಳ್ಳು ಅವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಾ.ವರದರಾಜ ಚಂದ್ರಗಿರಿ ಅಭಿನಂದನಾ ಭಾಷಣ ಮಾಡುವರು. ಮುಖ್ಯ ಅತಿಥಿಳಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್. ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಮನಮೋಹನ್ ಎಂ., ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ.ವಿಜಯಸರಸ್ವತಿ ಬಿ., ಪತ್ರಿಕೋದ್ಯಮ ವಿಭಾಗದ ಹವ್ಯಶ್ರೀ ಉಪಸ್ಥಿತರಿದ್ದರು.