ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ

ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿದ ಪಾಕ್‌ ಸರಕಾರ

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕಾರ್ಯಾಚರಣೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಇದರ ಬೆನ್ನಿಗೆ ಪಾಕಿಸ್ಥಾನದಲ್ಲಿ ಯುದ್ಧ ಭೀತಿ ತಾರಕಕ್ಕೇರಿದೆ. ಸ್ವತಹ ಪಾಕಿಸ್ಥಾನದ ಸಚಿವರೇ 36 ತಾಸಿನೊಳಗೆ ನಮ್ಮ ಮೇಲೆ ದಾಳಿಯಾಗಬಹುದು ಎಂದು ಹೇಳಿಕೊಂಡಿದ್ದಾರೆ.

ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಭಾರತೀಯ ಸೇನೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಮೋದಿ ತಿಳಿಸಿದ್ದಾರೆ.

















































 
 

ಪಾಕಿಸ್ಥಾನ ವಿರುದ್ಧ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗುತ್ತಿದೆ. ಮುಂದಿನ 24-36 ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲು ಯೋಜಿಸುತ್ತಿದೆ ಎಂದು ಪಾಕ್‌ ಸಚಿವ ಅತಾವುಲ್ಲಾ ತರಾರ್‌ ಹೇಳಿದ್ದಾರೆ. ಪ್ರಧಾನಿ ಮೋದಿ ಸರಣಿ ಸಭೆ ನಡೆಸಿದ ಬೆನ್ನಲ್ಲೇ ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ಪಾಕಿಸ್ಥಾನ ಮಾತನಾಡಿದೆ.

26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪ ಆಧಾರರಹಿತವಾದದ್ದು. ಕಪೋಲಕಲ್ಪಿತ ಆರೋಪಗಳ ಆಧಾರದ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ ಎಂದು ಪಾಕ್ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ.

ಭಾರತ ಸ್ವತಃ ತಾನೇ ತೀರ್ಪುಗಾರನಂತೆ ವರ್ತಿಸುತ್ತಿದೆ. ಜವಾಬ್ದಾರಿಯುತ ರಾಷ್ಟ್ರವಾಗಿ ಸತ್ಯವನ್ನು ಖಚಿತಪಡಿಸಿಕೊಳ್ಳಲು ತಜ್ಞರ ಆಯೋಗಕ್ಕೆ ವಿಶ್ವಾಸಾರ್ಹ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಲು ಪಾಕಿಸ್ಥಾನ ಮುಕ್ತ ಅವಕಾಶ ನೀಡಿದೆ. ಪಾಕಿಸ್ಥಾನ ಕೂಡ ಭಯೋತ್ಪಾದನೆಯ ಬಲಿಪಶುವಾಗಿದೆ ಎಂದು ತರಾರ್‌ ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top