ಅಹಮದಾಬಾದ್ : ಭಾರತ ಹಾಗೂ ಆಸ್ಟ್ರೇಲಿಯ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯ ಪ್ರಧಾನಿ ಆಂಥೋನಿ ಆಲ್ಬನೀಸ್ ಜತೆ ಪ್ರಧಾನಿ ನರೇಂದ್ರರ ಮೋದಿ ಸಾಕ್ಷಿಯಾದರು.ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಮೊಟೇರಾದಲ್ಲಿನ ಪಂದ್ಯವನ್ನು ಮೋದಿ ಹಾಗೂ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಆಲ್ಬನೀಸ್ ಜತೆಯಾಗಿ ಇಂದು ವೀಕ್ಷಿಸಿಸದರು. ಸ್ಟೇಡಿಯಂಗೆ ಮರುನಾಮಕರಣ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮೈದಾನಕ್ಕಾಗಮಿಸಿ ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ.
ಮೈದಾನಕ್ಕಾಗಮಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ವಾಗತಿಸಿದರು. ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಆಲ್ಬನೀಸ್ಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಲಾಯಿತು. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಆಸೀಸ್ ನಾಯಕ ಸ್ಟೀವ್ ಸ್ಮಿತ್ ತಮ್ಮ ದೇಶದ ಪ್ರಧಾನಿಗಳಿಂದ ವಿಶೇಷ ಟೆಸ್ಟ್ ಕ್ಯಾಪ್ ಪಡೆದುಕೊಂಡರು.
ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಂಥೋನಿ ಆಲ್ಬನೀಸ್ ಅವರು ವಿಶೇಷವಾಗಿ ತಯಾರಿಸಲಾಗಿದ್ದ ರಥದಲ್ಲಿ ಮೈದಾನಕ್ಕೆ ಒಂದು ಸುತ್ತು ಹಾಕಿ ಅಭಿಮಾನಿಗಳತ್ತ ಕೈಬೀಸಿ ಗೌರವ ವಂದನೆ ಸ್ವೀಕರಿಸಿದರು.