ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು 2025 ಮಾರ್ಚ ನಲ್ಲಿ ಜರಗಿದ ಎಸ್. ಎಸ್. ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿ ನೂರು ಶೇಕಡ ಫಲಿತಾಂಶ ಬಂದಿರುತ್ತದೆ. ಸಂಸ್ಥೆಯ ಪರಮ ಪೋಷಕರಾದ ಪೂಜ್ಯ ಶ್ರೀ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರಾದ ಸೂರ್ಯ ಕುಮಾರ್ ಹಳೆಯಂಗಡಿ, ಕಾರ್ಯದರ್ಶಿ ಗುರುರಾಜ ಕೆ ಮಂಗಳೂರು ಮತ್ತು ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಅನುಷಾ 581(92.96), ವಸಂತ 556(88.96), ಕ್ಷಿತಿಜ್ ಬಡಿಗೇರ್ 537(85.92), ವಂಶಿಕಾ 554(88.65) ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಾಗಿದ್ದಾರೆ. 4 ಡಿಸ್ಟಿಂಕ್ಷನ್, 4 ಪ್ರಥಮ ದರ್ಜೆ, 3 ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ