ಕಡಬ: ತಾಲೂಕಿನ ಸವಣೂರು ಗ್ರಾಮದ ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮೇ 14 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 12 ಸೋಮವಾರ ಬೆಳಿಗ್ಗೆ 9.30 ಕ್ಕೆ ಹಸಿರುಹೊರೆಕಾಣಿಕೆ ಸಮರ್ಪಣೆ, ಉಪಾಹಾರ, ಅಲಂಕಾರ ಸೇವೆ, ಸ್ವಚ್ಛತೆ, ಸಂಜೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ಕ್ಕೆ ಸಾರ್ವಜನಿಕ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಪುಣ್ಯಾಹ ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ.
ಮೇ13 ಮಂಗಳವಾರ ಬೆಳಿಗ್ಗೆ 7 ರಿಂದ ಗಣಪತಿ ಹೋಮ, ಭಗವತಿ ಸೇವೆ, ಬಿಂಬ ಶುದ್ಧಿ, ಕಲೆಶುದ್ಧಿ, ಅನುಜ್ಞಾಕಲಶ, ಶಯ್ಯಾಪೂಜೆ, ಅನುಜ್ಞಾ ಪ್ರಾರ್ಥನೆ, ಜೀವೋದ್ವಾಸನೆ, ಶಯ್ಯೆಯಲ್ಲಿ ಪೂಜೆ, ಮಧ್ಯಾಹ್ನ 1 ಕ್ಕೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಅಧಿವಾಸ ಹೋಮ, ಕಲಶಪೂಜೆ, ಭಗವತಿ ಸೇವೆ, ಜ್ಞಾನಾಧಿವಾಸ, ಅಧಿವಾಸ ಪೂಜೆ, ಸಂಜೆ 5.30 ರಿಂದ ಗುರುಕುಲ ಕಲಾಕೇಂದ್ರ ಪುರುಷರಕಟ್ಟೆ ಅವರಿಂದ ಗಾನನೃತ್ಯ ಸಂಭ್ರಮ, ರಾತ್ರಿ 7 ಕ್ಕೆ ಸಭಾ ಕಾರ್ಯಕ್ರಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 8 ಕ್ಕೆ ಕಲಾಸಂಗಮ ಕಲಾವಿದರಿಂದ ತುಳು ರಂಗಭೂಮಿಯಲ್ಲಿ ಮೂಡಿಸಿದ ನಾಟಕ ‘ಶಿವಧೂತೆ’ ಗುಳಿಗೆ ಪ್ರದರ್ಶನಗೊಳ್ಳಲಿದೆ.
ಮೇ 14 ಬುಧವಾರ ಬೆಳಿಗ್ಗೆ 5 ಕ್ಕೆ ಪ್ರಾಸಾದ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ಬೆಳಿಗ್ಗೆ 6.30 ರಿಂದ 7.03 ರ ವೃಷಭ ಲಗ್ನದಲ್ಲಿ ದೈವಗಳ ಪ್ರತಿಷ್ಠೆ, ಜೀವಕಲಶಾಭಿಷೇಕ, ಕಲಶಾಭಿಷೇಕ, ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 6 ರಿಂದ ಭಜನಾ ಕಾರ್ಯಕ್ರಮ, 7 ಕ್ಕೆ ದೈವಗಳ ಭಂಡಾರ ತೆಗೆಯುವುದು.
ಮೇ 15 ಗುರುವಾರ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ 6.30 ಕ್ಕೆ ಶ್ರೀ ಉಳ್ಳಾಕ್ಲು ದೈವದ ನೇಮೋತ್ಸವ, 8 ರಿಂದ ಶ್ರೀ ಕೆಡೆಂಜೊಡಿತ್ತಾಯ ದೈವದ ನೇಮೋತ್ಸವ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 4 ರಿಂದ ಶ್ರೀ ಪಂಜುರ್ಲಿ ಹಾಗೂ ಇತರ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.
ಮೇ 16 ಶುಕ್ರವಾರ ಸಂಜೆ 6 ಕ್ಕೆ ಮುಗೇರಿನಿಂದ ಗುಳಿಗ ಮಾರಿ ಹೊರಡುವುದು, ರಾತ್ರಿ 7 ಕ್ಕೆ ಮಾಂತೂರಿನಲ್ಲಿ ಶಿರಾಡಿ ದೈವದ ನೇಮವಾಗಿ ಸರ್ವೆಯಲ್ಲಿ ಮಾರಿ ಬಿಡುವುದು ನಡೆಯಲಿದೆ. ಮೇ 13 ಮಂಗಳವಾರ ರಾತ್ರಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಾಣಿಲ ಶ್ರೀಧಾಮದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳಿಂದ ಆಶೀರ್ವಚನ ನಡೆಯಲಿದ್ದು, ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಭಾ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಪ್ರತಾಪಸಿಂಹ ನಾಯಕ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್.ಅಂಗಾರ, ಮಾಜಿ ಶಾಸಕ ಸಂಜೀವ ಮಠಂದೂರು, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ., ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಸುಮನ ಮುರಳಿಮೋಹನ ಶೆಟ್ಟಿ, ಶಿವಪ್ರಸಾದ ಶೆಟ್ಟಿ ಕಿನಾರ, ಅಧ್ಯಕ್ಷ ದಿನೇಶ್ ಮೆದು, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.