ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ತಕ್ಷಣ ಉಪ್ಪೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನದ ಹೊತ್ತಿಗೆ ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಹತ್ತಿರದ ಸ್ಪರ್ಶ್ ಆಸ್ಪತ್ರೆಗೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೇರಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಯುಐ ಸಿನಿಮಾ ಶೂಟಿಂಗ್ ವೇಳೆ ಇದೇ ರೀತಿ ಆಗಿತ್ತು. ಸದ್ಯ ಉಪ್ಪಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆಯಿಲ್ಲ ಎಂದು ಮೂಲಗಳು ತಿಳಿಸಿವೆ.
























