ಶ್ರೀನಗರ: ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಹಿತ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಬಂಧಿಸಿದೆ. ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ.
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು 10ಕ್ಕೂ ಹೆಚ್ಚು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ. ಕಾಡಿನಲ್ಲಿ ಅಡಗಸಿಟ್ಟಿದ್ದ ಅಪಾರ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಕೊಳ್ಳಲಾಗಿದೆ.